


ಕ್ರೀಡೆಯಿಂದ ಆರೋಗ್ಯ ವೃದ್ಧಿ: ಇನ್ಸ್ಪೆಕ್ಟರ್ ಮಂಜಪ್ಪ ಡಿ ಆರ್
ಕಾಂತಾವರ : ಶೈಕ್ಷಣಿಕದೊಂದಿಗೆ ಕ್ರೀಡಾಕೂಟ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳ ಪ್ರಗತಿಗೆ ಪೂರಕವಾಗುತ್ತದೆ. ಕ್ರೀಡೆಯು ದೇಹದ ಬೆಳವಣಿಗೆಯೊಂದಿಗೆ ಆರೋಗ್ಯ ವೃದ್ಧಿಗೆ ಕಾರಣವಾಗುತ್ತದೆ ಎಂದು ಇನ್ಸ್ಪೆಕ್ಟರ್ ಮಂಜಪ್ಪ ಡಿ ಆರ್ ಹೇಳಿದರು.




ಕಾಂತಾವರ ಪ್ರಕೃತಿ ಸಮೂಹ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಗೌರವ ಅತಿಥಿಗಳಾಗಿ ಸಾಣೂರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಕೋಟ್ಯಾನ್ ಉಪಸ್ಥಿತರಿದ್ದರು.
ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಚಾಲ್ಸ್ ಕ್ರಾಸ್ತ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ಕುರಿತು ತಿಳಿಸಿದರು.
ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಗೌಡ ಅವರು ಮಾತನಾಡಿ ಆಟೋಟಗಳಲ್ಲಿ ಭಾಗವಹಿಸುವುದರಿಂದ ಬದುಕಿನಲ್ಲಿ ಹೊಸ ಉಲ್ಲಾಸ ತರುತ್ತದೆ. ಇದು ಕಲಿಕೆಗೆ ಪೂರಕವಾಗುತ್ತದೆ ಎಂದರು.
ಸಂಸ್ಥೆಯ ಆಡಳಿತ ಅಧಿಕಾರಿ ಮಧುಸೂದನ್ ಶಿಂಧೆ ಹಾಗೂ ಸಂಸ್ಥೆಯ ಮೇಲ್ವಿಚಾರಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಪೂರ್ವಾಭಿಮುಖವಾಗಿ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಅತಿಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಶಿಕ್ಷಕಿ ರೌನಕ್ ಆರಾ ಸ್ವಾಗತಿಸಿದರು, ಶಿಕ್ಷಕಿ ಮಮತಾ ವಂದಿಸಿದರು, ಶಿಕ್ಷಕಿ ಸೌಮ್ಯ ವೈ ಎಸ್ ನಿರೂಪಿಸಿದರು.






































