ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Picture of RB NEWS

RB NEWS

Bureau Report

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ, ವತಿಯಿಂದ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.) ಬಂಟ್ವಾಳ, ಇದರ ಆಶ್ರಯದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಂಟ್ವಾಳ ಇದರ ಸಹಯೋಗದೊಂದಿಗೆ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಅ. 6ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಲಿರುವುದು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೋನಾಲ್ಟ್ ಡಿಸೋಜ ವಹಿಸಲಿರುವರು.

ಕಾರ್ಯಕ್ರಮದ ದಿಕ್ಸೂಚಿ ಭಾಷಣವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ.)ಬೆಳ್ತಂಗಡಿಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕಾರಂತ್, ರಾಣಿ ಅಬ್ಬಕ್ಕ ತುಳು ಅಕಾಡೆಮಿ ಅಧ್ಯಕ್ಷ ತುಕರಾಮ್ ಪೂಜಾರಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ ಕಕ್ಯ, ಬಂಟ್ವಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಪ್ರಕಾಶ್ ಮೊದಲಾದವರು ಭಾಗವಹಿಸಲಿರುವರು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಎಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top