ಚುನಾವಣೆಯಲ್ಲಿ ಪಕ್ಷದ ನಿಷ್ಠೆಗೆ ಮಹತ್ವ: ಶಾಸಕ ವಿ. ಸುನಿಲ್ ಕುಮಾರ್
RB NEWS
Bureau Report
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆ
ಚುನಾವಣೆಯಲ್ಲಿ ಪಕ್ಷದ ನಿಷ್ಠೆಗೆ ಮಹತ್ವ: ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ 24: ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಜವಾಬ್ದಾರಿ ನಿರ್ವಹಣಾ ಸಭೆಯು ಕಾರ್ಕಳ ವಿಧಾಸನಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ‘ವಿಕಾಸ’ ಜನಸೇವಾ ಕಛೇರಿಯಲ್ಲಿ ಶನಿವಾರ ಜರುಗಿತು.
ಕಾರ್ಕಳ ವಿಧಾನಸಭಾ ಕ್ಷೇತ್ರದ 209 ಬೂತ್ಗಳ ಜವಾಬ್ದಾರಿಯನ್ನು ಹಂಚಲಾಯಿತು. ಸಭೆಯಲ್ಲಿ ಶಾಸಕರು ಭಾರತೀಯ ಜನತಾ ಪಾರ್ಟಿಯ ಪ್ರತಿಯೊಬ್ಬ ಕಾರ್ಯಕರ್ತನು ತಾನೇ ಅಭ್ಯರ್ಥಿಯೆಂದು ಮನಗೊಂಡು, ತಮ್ಮ ತಮ್ಮ ಬೂತ್ಗಳಲ್ಲಿ ಪದವೀಧರರು ಹಾಗೂ ಶಿಕ್ಷಕರನ್ನು ಸಂಪರ್ಕಿಸಿ, ಎನ್ಡಿಎ ಅಭ್ಯರ್ಥಿಗಳಿಗೆ ಮತದಾನ ಮಾಡುವಂತೆ ನೋಡಿಕೊಳ್ಳಬೇಕು ಎಂದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ವೈದ್ಯಕೀಯ ಕ್ಷೇತ್ರದಲ್ಲಿ ಈವರೆಗೆ ಮಾಡಿದ ಸೇವೆಯನ್ನು, ರಾಜಕೀಯ ಕ್ಷೇತ್ರದಲ್ಲಿಯೂ ಸಹ ಜನಸೇವೆಯನ್ನು ಮಾಡುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಸಹಕರಿಸುವಂತೆ ಕೋರಿಕೊಂಡರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ಎಲ್ ಭೋಜೇಗೌಡರವರು ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ತಾನು ಈಗಾಗಲೇ ಮಾಡಿರುವ ಹಲವಾರು ಕೆಲಸಗಳನ್ನು ಮುಂದಿರಿಸಿ, ಮುಂದೆಯೂ ಸಹ ತಮ್ಮ ಸೇವೆಯನ್ನು ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರ ಸಹಕಾರವನ್ನು ಕೋರಿಕೊಂಡರು.
ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಮಣಿರಾಜ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ’ ಹಾಗೂ ಇತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.