ಪುತ್ತೂರು: ಮನೆಯ ಹಿತ್ತಲಿಗೆ ಅತಿಕ್ರಮಣಗೈದ ತಂಡವೊಂದು ವಿಚಾರವೊಂದಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳಿಂದ ನಿಂದನೆಗೈದು ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿದಿದಂತೆ 11ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮೂಡೂರು ತಾರಿಗುಡ್ಡೆಯ ಜಯಾನಂದ(41) ಎಂಬವರು ಈ ಕುರಿತು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದವರು.
ಮಾಚ್೯ 17ರ ಸಂಜೆ ವೇಳೆಗೆ ಈ ಘಟನೆ ಸಂಭವಿಸಿದೆ.
ಜಯಾನಂದ ಮನೆಯಲ್ಲಿದ್ಧ ಸಂದರ್ಭದಲ್ಲಿ ಪ್ರಜ್ವಲ್ ರೈ, ಸನತ್ ರೈ ಮತ್ತು ಇತರ ಸುಮಾರು 15 ಜನರು ಮನೆಯೊಳಗೆ ಅಕ್ರಮ ಪ್ರವೇಶಮಾಡಿ ಜಯನಂದಾ ಹಾಗೂ ಅವರ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂ: 23/2023 00:448,143,147,504,506, 149 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಘಟನೆಯ ಹಿನ್ನಲೆ…




ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ಜಯಾನಂದ ಪ್ರಕರಣದ ದೂರುದಾರ.
ಕಾಂಗ್ರೆಸ್ ಸರ್ಕಾರದ ಯೋಜನೆಯ ಕುರಿತು ಜಯಾನಂದ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವುದು ಕಾಂಗ್ರೆಸ್ ಕಾರ್ಯಕರ್ತರ ಕೆಂಗಣ್ಣಿಗೆ ಕಾರಣವೂ ಆಗಿತ್ತೆನ್ನಲಾಗಿದೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಜಯಾನಂದ ವಾಸಮನೆಯ ಹಿತ್ತಲಿಗೆ ಪ್ರವೇಶಿಸ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇತ್ತಂಡದೊಳಗೆ ವಾಗ್ದಾಳಿಯೂ ನಡೆದಿತ್ತು.






































