ಜನಪರ ಆಡಳಿತದೊಂದಿಗೆ ಯಶಸ್ವೀ ಮೂರು ವರ್ಷ ಪೂರೈಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು : ಉದಯ ಶೆಟ್ಟಿ ಮುನಿಯಾಲು

Picture of RB NEWS

RB NEWS

Bureau Report


ಕಾರ್ಕಳ, ಮೇ 20 : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿರುವುದು ಜನಪರ ಆಡಳಿತಕ್ಕೆ ದೊರೆತ ಜನಮನ್ನಣೆಯ ಪ್ರತೀಕವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ತ್ರೈವಾರ್ಷಿಕವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಪುಟದ ಸಚಿವರು ಹಾಗೂ ಎಲ್ಲಾ ಶಾಸಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರವು ಜನಸಾಮಾನ್ಯರ ಬದುಕಿಗೆ ಸ್ಪಂದಿಸುವ ಅನೇಕ ಮಹತ್ವದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್ ನಂತರದ ದಿನಗಳಲ್ಲಿ ಉದ್ಯೋಗ ನಷ್ಟ, ಬೆಲೆ ಏರಿಕೆ ಹಾಗೂ ಆರ್ಥಿಕ ಸಂಕಷ್ಟಗಳಿಂದ ಸಂಕಷ್ಟಕ್ಕೀಡಾದ ಜನರ ಬದುಕಿಗೆ ಕಾಂಗ್ರೆಸ್ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆಸರೆಯಾಗಿದೆ ಎಂದಿದ್ದಾರೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಯುವಜನತೆ ಹಾಗೂ ದುರ್ಬಲ ವರ್ಗಗಳಿಗೆ ನೇರ ಪ್ರಯೋಜನ ತಲುಪಿದೆ ಎಂಬ ಸಂತೋಷ ನಮಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತದ ದಿಕ್ಕಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಜನರಲ್ಲಿ ವಿಶ್ವಾಸ ಮೂಡಿಸಿವೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದವರ ಹಿತಾಸಕ್ತಿಯನ್ನು ಕಾಪಾಡುವ ಕೆಲಸ ಸರ್ಕಾರದಿಂದ ನಿರಂತರವಾಗಿ ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿಸಲು ಸರ್ಕಾರ ಯಶಸ್ವಿಯಾಗಲಿ ಎಂದು ಹಾರೈಸಿರುವ ಉದಯ ಶೆಟ್ಟಿ ಮುನಿಯಾಲು, ರಾಜ್ಯ ಸರ್ಕಾರವು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟದ ಸಚಿವರು ಹಾಗೂ ಎಲ್ಲಾ ಶಾಸಕರಿಗೆ ಶುಭಾಶಯಗಳೊಂದಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top