ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

Picture of RB NEWS

RB NEWS

Bureau Report

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿ ವಿದ್ಯಾರ್ಥಿನಿಯರಾದ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟೋಕ್‌ನಲ್ಲಿ ದ್ವಿತೀಯ ಸ್ಥಾನ ಮತ್ತು 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟೋಕ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

ಆರ್.ಬಿ.ನ್ಯೂಸ್

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top