ಜೂನ್ 27ರಂದು ಕೆಂಪೇಗೌಡ ಜಯಂತಿ
ಕಾರ್ಕಳ : ಜೂನ್ 27 ರಂದು ಬೆಳಿಗ್ಗೆ 11:00 ಗಂಟೆಗೆ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ, ಸರಕಾರಿ ಸಂಯುಕ್ತ ಪ್ರೌಡ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಇದಕ್ಕೆ ಪೂರಕವಾಗಿ ಕಾರ್ಕಳ ತಾಲೂಕು ಮಟ್ಟದ ಕೆಂಪೇಗೌಡ ರವರ ಬಗ್ಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು. ಇದರ ‘ಮೇಲುಸ್ತುವರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಯವರು ವಹಿಸಿದ್ದಾರೆ,
ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸುವುದರ ಕುರಿತು ಉಪನ್ಯಾಸವನ್ನು ಮಾಡುವುದು.
ಕೆಂಪೇಗೌಡರ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ತಾಲೂಕು ಕಛೇರಿಯಲ್ಲಿ ಸಭೆ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗೌರವನ್ವಿತ ಚುನಾಯಿತ ಜನಪ್ರತಿನಿಧಿಗಳು, ತಾಲೂಕಿನ ಎಲ್ಲಾ ಇಲಾಖಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಮತ್ತು ತಾಲೂಕಿನ ಮಹಾಜನತೆಗೆ ಕೋರುತ್ತಾ, ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಗಳಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೆ ಪೂರ್ಣ ಸಹಕಾರ ನೀಡುವಂತೆ ರಾಷ್ಟ್ರೀಯ ಹಬ್ಬಗಳ ಸಮಿತಿಯ ಅಧ್ಯಕ್ಷರಾಗಿರುವ ತಹಶೀಲ್ದಾರ್
ನರಸಪ್ಪ ತಹಶೀಲ್ದಾರ ಪ್ರಕಟಣೆಯಲ್ಲಿ ಕೋರಿದ್ದಾರೆ.






































