ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆ:
ಸಾಧನೆಗೈದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ
ಸoಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಚೇತನ್ ಗೌಡಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ಎಂ 99.1632262, ಎಚ್. ಎರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ.
ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ಎಚ್. ಬಿ, ಆದಿತ್ಯವಟಿಕೆ ಮತ್ತು ವಿನಯ ಕುಮಾರ್ ರವರು ಅಭಿನಂದನೆ ಸಲ್ಲಿಸಿದ್ದಾರೆ.



































