ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ರೂ. 5.00 ಕೋಟಿ ಅನುದಾನ -ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ: ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ರೂ. 05.00 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ -ರೆಂಜಾಳ -ಇರ್ವತ್ತೂರು -ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕ ವಿ ಸುನಿಲ್ ಕುಮಾರ್ ರವರು ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಫಲವಾಗಿ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.05.00 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತದೆ.
ಶಾಸಕ ಸುನೀಲ್ ಕುಮಾರ್ ಅವರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದೆ. ಆದಷ್ಟೂ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.





































