ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ- 2024

Picture of RB NEWS

RB NEWS

Bureau Report

ಕಾರ್ಕಳ ಡಿ. 20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ ಡಿಸೆಂಬರ್ 22 (ಆದಿತ್ಯವಾರ) ರಂದು ನಡೆಯಲಿದೆ.

ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top