ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗೆ ದ್ವಿತೀಯ ರ್ಯಾಂಕ್
ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ 2023-24 ನೇ ಸಾಲಿನ ಬಿಬಿಎ ಪದವಿ ವಿಭಾಗದ ಫಲಿತಾಂಶದಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ಸಾಯಿರಾಜ್ ಜಯರಾಮ್ ಶೆಟ್ಟಿ ಶೇಕಡ 93.03 ಅಂಕಗಳನ್ನು ಗಳಿಸಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.
ಇವರಿಗೆ ನಿಟ್ಟೆ ಪರಿಗಣಿತ ವಿಶವ್ವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ, ನಿಟ್ಟೆ ಪರಿಗಣಿತ ವಿಶವ್ವಿದ್ಯಾಲಯದ ಪ್ರೋ-ಚಾನ್ಸಲರ್ ಗಳಾದ ವಿಶಾಲ್ ಹೆಗ್ಡೆ ಮತ್ತು ಪ್ರೊ.ಡಾ. ಶಾಂತರಾಮ ಶೆಟ್ಟಿ, ನಿಟ್ಟೆ ಪರಿಗಣಿತ ವಿಶವ್ವಿದ್ಯಾಲಯದ ಕುಲಪತಿ ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಹಾಗೂ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ ಮತ್ತು ಕಾಲೇಜಿನ ಅಧ್ಯಾಪಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದರು.





































