ಡಾ.ರವೀಂದ್ರ ಶೆಟ್ಟಿ ಬಜಗೋಳಿ ಇವರನ್ನು ಸನ್ಮಾನ
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸುಕೃತಿ 2025 ಉಡುಪಿ ಶ್ರೀಕೃಷ್ಣ ಮಠದಲ್ಲಿ ಏಪ್ರಿಲ್ 30 ಮತ್ತು ಮೇ 1ರಂದು ಜರುಗಿತು.
ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳಾನಾಡಿದರು.
ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಮತ್ತು ಕಿರಿಯ ಯತಿ ಶ್ರೀ ಸುಶೀಂದ್ರತೀರ್ಥರು ದೀಪ ಬೆಳಗಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಮತ್ತು ಸಂಘಟನೆಯಲ್ಲಿ ಸಾಧನೆಗೈದ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಇವರನ್ನು ಸನ್ಮಾನಿಸಲಾಯಿತು.


























