





ಡಿವೈಎಸ್ಪಿ ರಾಮಚಂದ್ರಪ್ಪನ ಕಾಮಕಾಂಡ ಬಯಲು: ಅಮಾನತು ಬೆನ್ನಲ್ಲೇ ಬಂಧಿಸಿದ ಪೊಲೀಸರು
ಬೆಂಗಳೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.


ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ನನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು.
ಇದರ ಬೆನ್ನಲ್ಲೇ ಇದೀಗ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ನನ್ನು ಬಂಧಿಸಲಾಗಿದೆ.



































