




ಡಿ. 14ರಂದು ಕಾರ್ಕಳದಲ್ಲಿ ಲೋಕ ಅದಾಲತ್
ಕಾರ್ಕಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಡಿ.14ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5:00ಗಂಟೆಯವರೆಗೆ ಕಾರ್ಕಳದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ.
ನ್ಯಾಯಾಲಯದಲ್ಲಿ ವಿಲೇವಾರಿಗೆ ಬಾಕಿ ಇರುವ ರಾಜಿಗೆ ಯೋಗ್ಯವಾದ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ (Compoundable) ಪ್ರಕರಣಗಳನ್ನು ಸೂಕ್ತ ಸಮಾಲೋಚಕರು ಮತ್ತು ತಮ್ಮ ವಕೀಲರ ಮೂಲಕ ರಾಜಿ ಮಾಡಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಪೂರ್ಣ ರೀತಿಯಲ್ಲಿ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳಬೇಕಾಗಿ ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಶರ್ಮಿಳಾ ಸಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




































