ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ

Picture of RB NEWS

RB NEWS

Bureau Report

ಮೂಡುಬಿದಿರೆ : ಇಲ್ಲಿಗೆ ಸಮೀಪದ ಕಾಂತಾವರದ ಯಕ್ಷ ದೇಗುಲದ ವಾರ್ಷಿಕ ಆಟ ,ಕೂಟ, ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಇದೇ ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿವೆತ್ತ ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ರವರಿಗೆ ಹಾಗೂ ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿ ಯನ್ನು ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ ತೀರ್ಮಾನಿಸಿದ್ದು ಅಂದು ನಡೆಯುವ ಸಭಾ ಸಂಭ್ರಮದಲ್ಲಿ ಕ್ಷೇತ್ರದ ಧರ್ಮದರ್ಶಿ ಡಾ. ಜೀವಂಧರ ಬಲ್ಲಾಳರ ಅದ್ಯಕ್ಷ ತೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು ಮಾಜಿ ಸಚಿವರು ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪ್ರಧಾನ ಒಳಗೊಂಡಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮಹಾವೀರ ಪಾಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top