ತಲವಾರು ದಾಳಿ : ಆರೋಪಿಗಳ ಬಂಧನ

Picture of RB NEWS

RB NEWS

Bureau Report

ಮೂಡುಬಿದಿರೆ : ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಬಂಧಿತರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಬಂಧಿತರ ಪೈಕಿ ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಘಟನಾ ಸ್ಥಳದಲ್ಲಿ ಸಾರ್ವಜನಿಕರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದರು.

ಉಳಿದಂತೆ ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಜೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ನಡೆದ ಕೆಲ ಹೊತ್ತಿನೊಳಗಾಗಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಕಾರ್ಯದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top