ತಲೆಗೆ ಕಲ್ಲು ಹಾಕಿ ಮಹಿಳೆಯ ಕೊಲೆ: ಆರೋಪಿ ಸೆರೆ

Picture of RB NEWS

RB NEWS

Bureau Report

ಸುಳ್ಯ: ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ಳಾರೆಯ ಪಾಟಾಜೆಯ ನಳಿನಿ(55) ಎಂಬವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top