ತೀರ್ಪು ಸ್ವಾಗತಾರ್ಹ: ದಸಂಸ
ಕಾರ್ಕಳ: ಎಸ್ಸಿ, ಎಸ್ಟಿ ವರ್ಗಗಳ ಮೀಸಲಿನಲ್ಲಿ ಉಪ ಪಂಗಡಗಳನ್ನು ರಚಿಸಿ, ದಮನಿತ ಸಮುದಾಯಗಳಿಗೆ ಕೋಟಾ ಕಲ್ಪಿಸಲು ರಾಜ್ಯ ಸರಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿದ ನಿರ್ಣಾಯಕ ತೀರ್ಪನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ವಾದ) ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಪ್ಪನಕ್ರೆ ಸ್ವಾಗತಿಸಿದ್ದಾರೆ.
ನ್ಯಾಯಾಧೀಶ ಎ.ಜೆ. ಸದಾಶಿವ ಅಧ್ಯಕ್ಷತೆಯಲ್ಲಿ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರಕಾರ ಆಯೋಗದ ಶಿಫಾರಸ್ಸನ್ನು ಜಾರಿಗೆ ಕೈಗೊಳ್ಳಲಿದೆ ಎಂದು ತಿಳಿಸಿದ್ದು, ಇದು ದಲಿತ ಶೋಷಿತ ಸಮುದಾಯಗಳ 101 ಪ.ಜಾತಿಗಳಿಗೆ ಸಾಮಾಜಿಕ ನ್ಯಾಯ ದೊರಕಿ ಸುವಲ್ಲಿ ತೀರ್ಪು ನೆರವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

































