ಗರ್ಭಿಣಿ ಆತ್ಮಹತ್ಯೆ

Picture of RB NEWS

RB NEWS

Bureau Report

ಪುತ್ತೂರು: ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು.

ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top