ಮಂಗಳೂರು: ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ.
ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಸೋಲಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಈ ಬಾರಿಯಾದರೂ ಈ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಪಣತೊಟ್ಟಿತ್ತು. ಹೀಗಾಗಿ ಈ ಬಾರಿ ಬಿಜೆಪಿಯೂ ಕಾಂಗ್ರೆಸ್ನಿಂದ ಪ್ರಬಲ ಸ್ಪರ್ಧೆಯನ್ನು ಎದುರಿಸಿತ್ತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ.
ದ ಕ ಜಿಲ್ಲಾ ಸಂಸದರಾಗಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವು ದಾಖಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಚೌಟ 764132 ಮತಗಳೊಂದಿಗೆ 149208 ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 614924 ಮತ ಪಡೆದಿದ್ದಾರೆ.
ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಕಾಂತಪ್ಪ ಅಲಂಗಾರ್ 4232 ಮತ ಗಳಿಸಿದ್ದಾರೆ.
ಕರುನಾಡ ಸೇವಕರ ಪಾರ್ಟಿ ಅಭ್ಯರ್ಥಿ ದುರ್ಗಾ ಪ್ರಸಾದ್ 2592 ಮತಗಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಪ್ರಿತ್ ಕುಮಾರ್ ಪೂಜಾರಿ 1901 ಮತ.
ಪಕ್ಷೇತರ ಅಭ್ಯರ್ಥಿ ಮ್ಯಾಕ್ಸಿಮ್ ಪಿಂಟೊ 1690 ಮತ.
ಪಕ್ಷೇತರ ಅಭ್ಯರ್ಥಿ ದೀಪಕ್ ರಾಜೇಶ್ ಕುವೆಲ್ಲೊ 976 ಮತ.
ಉತ್ತಮ ಪ್ರಜಾಕೀಯ ಪಾರ್ಟಿ ಪ್ರಜಾಕೀಯ ಮನೋಹರ್ 971 ಮತ.
ಕರ್ನಾಟಕ ರಾಷ್ಟ್ರ ಸಮೀತಿ ರಂಜಿನಿ ಎಂ 776 ಮತ.
ಜಿಲ್ಲೆಯಲ್ಲಿ ಈ ಬಾರಿ ನೋಟಕ್ಕೆ 23576 ಮತ ಚಲಾವಣೆ ಆಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಹೊಸ ಮುಖವಾಗಿ ಯುವ ನಾಯಕ ಮಿಥುನ್ ರೈ ಅವರನ್ನು ಕಣಕ್ಕಿಳಿಸಿತ್ತು. ಆದರೆ ಅವರಿಂದಲೂ ಬಿಜೆಪಿಯ ಗೆಲುವಿನ ಓಟಕ್ಕೆ ತಡೆ ಒಡ್ಡಲು ಸಾಧ್ಯವಾಗಿರಲಿಲ್ಲ. ಆ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ 7,74,285 ಮತ ಗಳಿಸಿದರೆ, ಮಿಥುನ್ ರೈ 4,99,664 ಮತಗಳಿಸಿ 2,74,621 ಮತಗಳ ಭಾರೀ ಅಂತರದಿಂದ ಸೋಲು ಕಂಡಿದ್ದರು.



































