ದಕ್ಸಿಣ ಭಾರತ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್
RB NEWS
Bureau Report
ದಕ್ಸಿಣ ಭಾರತ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ: ಕೇರಳದ ತ್ರಿಶೂರ್ನಲ್ಲಿ ಜರುಗಿದ ದಕ್ಸಿಣ ಭಾರತದ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ತಂಡವು ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು. ಆ ಮೂಲಕ ಕರ್ನಾಟಕ ರಾಜ್ಯ ತಂಡವನ್ನು ರಾಷ್ಟç ಮಟ್ಟದ ಪಂದ್ಯದಲ್ಲಿ ಪ್ರತಿನಿಧಿಸಲಿದೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಸೇರಿದಂತೆ ಒಟ್ಟು 7 ಪದಕಗಳನ್ನು ಪಡೆಯುದರೊಂದಿಗೆ ದಕ್ಷಿಣ ಭಾರತ ಮಟ್ಟದ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು. ಚಿನ್ನದ ಪದಕಗಳಿಸಿದವರು: ಶ್ರಾವ್ಯ-(48 ಕೆಜಿ), ಪಾವನಿ-(77 ಕೆಜಿ ಪ್ಲಸ್) ಬೆಳ್ಳಿಯ ಪದಕ ಗಳಿಸಿದವರು: ದೀಪಿಕಾ-(53 ಕೆಜಿ), ಕಾಂಚನ-(58 ಕೆಜಿ) ಕಂಚಿನ ಪದಕ ಗಳಿಸಿದವರು: ಪಲ್ಲವಿ-(44 ಕೆಜಿ), ಹಂಸವೇಣಿ-(63 ಕೆಜಿ), ಮಾನಸ-(77 ಕೆಜಿ) ಕ್ರೀಡಾಪಟುಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.