ದಲಿತರಿಗೆ ಮೀಸಲಾಗಿದ್ದ ಗಾಂಧಿಭವನ ಹಸ್ತಾಂತರಿಸಿದರೆ ಉಗ್ರಹೋರಾಟ: ಜಯನ್ ಮಲ್ಪೆ ಎಚ್ಚರಿಕೆ
ಉಡುಪಿ : ದಲಿತರ ಮೀಸಲು ಹಣದಿಂದ ನಿರ್ಮಾಣಗೊಂಡಿದ್ದ ಉಡುಪಿ ನಗರ ಸಭೆಯ ವ್ಯಾಪ್ತಿಯಲ್ಲಿರುವ ಬನ್ನಂಜೆ ಗಾಂಧಿಭವನವನ್ನು ಬೇರೆಯವರಿಗೆ ಹಸ್ತಾಂರಿಸಿದರೆ ಉಗ್ರಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಸಮಿತಿ ಸದಸ್ಯ ಜಯನ್ ಮಲ್ಪೆ ಜಿಲ್ಲಾಡಳಿತಕ್ಕೆ ಎಚ್ಚರಿಸಿದ್ದಾರೆ.
ಕಳೆದ 90ವರ್ಷಗಳಿಂದ ಲಕ್ಷಿö್ಮÃನಾರಾಯಣ ಭಜನಾ ಮಂಡಳಿಯಾಗಿದ್ದ ಈ ಜಾಗದಲ್ಲಿ ಆಗಿನ ಪುರಸಭೆ ಅಧ್ಯಕ್ಷರಾಗಿದ್ದ ಡಾ.ವಿ.ಎಸ್.ಆಚಾರ್ಯ ಮತ್ತು ರೊನಾಲ್ಡ್ ಪ್ರವೀನ್ ಕುಮಾರ್ರವರು ದಲಿತರ ಸಭೆ-ಸಮಾರಂಭ, ಸಾಂಸ್ಕçರಿಕ ಹಾಗೂ ದಾರ್ಮಿಕ ಕಾರ್ಯಕ್ರಮಕ್ಕೆ ಮೀಸಲು ನಿಧಿಯನ್ನು ಬಳಸಿಕೊಂಡು 1985ರಲ್ಲಿ ಗಾಂಧಿಭವನವನ್ನು ನಿರ್ಮಿಸಲಾಗಿತ್ತು.
ಈ ಗಾಂಧಿಭವನದಲ್ಲಿ ದಲಿತ ಸಂಘರ್ಷ ಸಮಿತಿ ಕಳೆದ ಸುಮಾರು 40ವರ್ಷಗಳಿಂದ ದಲಿತರ ಕುಂದುಕೊರತೆ ಸಭೆ ನಡೆಸಿಕೊಂಡು ಬರುತ್ತಿತ್ತು. ಜೊತೆಗೆ ಲಕ್ಷಿö್ಮÃನಾರಾಯಣ ಭಜನಾ ಮಂಡಳಿ ಹಾಗೂ ಉಡುಪಿ ತಾಲೂಕಿನ ದಲಿತರ ಸಾಂಸ್ಕೃತಿಕ,ತರಬೇತಿ,ಮದುವೆ ಸಭೆ ಸಮಾರಂಭ ನಡೆಸಿಕೊಂಡು ಬರಲಾಗುತ್ತಿತ್ತು.
ಈ ಗಾಂಧಿಭವನದ ಕಟ್ಟಡ ಕ್ರಮೇಣ ಸರಿಯಾದ ನಿರ್ವಾಹಣೆಗೆ ಉಡುಪಿ ನಗರಸಭೆ ಹಣನೀಡದೆ ಇರುವುದರಿಂದ ಕಟ್ಟಡ ಶೀತಲೀಕರಣಗೊಂಡು ಸರಿಯಾದ ನಿರ್ವಾಹಣೆ ಇಲ್ಲದೆ ಪಾಲುಬಿದ್ದಿತ್ತು.
ಇದೀಗ ದಲಿತರ ಮೀಸಲು ಹಣದಿಂದ ನಿರ್ಮಿಸಿರುವ ಮತ್ತು ಹಲವು ದಶಕಗಳಿಂದ ದಲಿತರಿಗಾಗಿ ಮೀಸಲಾಗಿರಿಸಿದ್ದ ಈ ಗಾಂಧಿಭವನವನ್ನು ಜಿಲ್ಲಾಧಿಕಾರಿ ಉಡುಪಿಯ ಸಂಜೀವನಿ ಜೀವನೋಪಾಯ ಪ್ರಚಾರ ಮತ್ತು ಮಾರ್ಕೆಟಿಂಗ್ ಸೊಸೈಟಿ,ಮಹಿಳಾ ಸ್ವಸಹಾಯ ಸಂಘಕ್ಕೆ ಹಾಗೂ ಹಿರಿಯ ನಾಗರಿಕ ಸಮಾಲೋಚನೆ ಘಟಕಕ್ಕೆ ಹಸ್ತಾಂತರಿಸಿರುವುದು ಜಿಲ್ಲೆಯ ದಲಿತ ಸಮುದಾಯಕ್ಕೆ ಮಾಡಿದ ಮಹಾದ್ರೋಹ ಎಂದಿರುವ ಜಯನ್ ಮಲ್ಪೆ ತಕ್ಷಣ ಈ ಆದೇಶವನ್ನು ಹಿಂದಕ್ಕೆ ಪಡೆಯದಿದ್ದಲ್ಲಿ ಉಗ್ರಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ದಲಿತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಾಹಿಸಬೇಕಾದ ಜಿಲ್ಲಾಧಿಕಾರಿ ಕಳೆದ 90ವರ್ಷಗಳಿಂದ ದಲಿತರ ದಾರ್ಮಿಕ,ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಿದ್ದ ಈ ಗಾಂಧಿಭವನವನ್ನು ಅನ್ಯರಿಗೆ ಹಸ್ತಾಂತರಿಸುವ ಮುನ್ನ ಸೌಜನ್ಯಕ್ಕೂ ದಲಿತರನ್ನು ವಿಶ್ವಾಸಕ್ಕೆ ಪಡೆಯದೆ ಏಕಾಎಕಿ ಗಾಂಧಿಭವನವನ್ನು ಹಸ್ತಾಂತರಿಸುವ ನಿರ್ಧಾರ ತೆಗೆದುಕೊಂಡು ಆದೇಶಿಸಿರುವುದು ದಲಿತ ಸಮಾಜಕ್ಕೆ ಮಾಡಿರು ಅನ್ಯಾಯ ಎಂದು ಜಯನ್ ಮಲ್ಪೆ ತಿಳಿಸಿದ್ದಾರೆ.



































