ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಅವರಿಗೆ ಉಡುಪಿ ಜಿಲ್ಲಾಡಳಿತದಿಂದ ಸನ್ಮಾನ
ಮಲ್ಪೆ:ಕರ್ನಾಟಕ ಸರಕಾರ ನೀಡಿದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂ ಪ್ರತಿಷ್ಠಿತ ಪ್ರಶಸ್ತಿ ಪಡೆದ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆಯವರನ್ನು ಉಡುಪಿ ಜಿಲ್ಲಾಡಳಿತ ಸನ್ಮಾನಿಸಿ ಗೌರವಿಸಿತು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪ,ನಗರಸಭೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ,ಪ.ಪಂಗಡಗಳ ಸಂಘಟನೆಯ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ರವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಶಾಲು ಹೊಂದಿಸಿದರೆ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ.ಪೇಟತೊಡಿಸಿದರು.ಶಾಸಕ ಯಶ್ಪಾಲ್ ಎ.ಸುವರ್ಣ ಹಾರಹಾಕಿದರೆ,ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಫಲಪುಷ್ಬ ನೀಡಿದರು,ಜಿ.ಪಂ.ಸಿಇಒ ಪ್ರತೀಕ್ ಬಾಯಲ್ ಸ್ಮರಣಿಕೆ ನೀಡಿದರು.
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು,ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ,ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ,ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ,ರೋಶನ್ ಮುಂತಾದ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ಪ್ರಾಮಾಣಿಕ,ದಕ್ಷ,ಹಾಗೂ ನಿಷ್ಠವಂತ ಅಧಿಕಾರಿಗಳಾದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷರ ನೇತೃತ್ವದಲ್ಲಿ ಸನ್ಮಾನ ಪಡೆದಿರುವುದು ಸಂತೋಷವಾಗಿದೆ ಎಂದಿರು ಜಯನ್ ಮಲ್ಪೆ ಯಾವುದೇ ಅರ್ಜಿ ಸಲ್ಲಿಸದೆ ಸರಕಾರವೇ ಗುರುತಿಸಿ ನೀಡಿರುವ ಈ ಪ್ರಶಸ್ತಿಯನ್ನು ದಲಿತ ಸಮಾಜಕ್ಕೆ ಅರ್ಪಿಸುವುದಾಗಿ ತಿಳಿಸಿದ್ದಾರೆ.
ಕಳೆದ ನಾಲ್ಕು ದಶಕಕ್ಕೂ ಹೆಚ್ಚು ಕಾಲ ನನ್ನ ಹೋರಾಟ ಮತ್ತು ಸಾಹಿತ್ಯವನ್ನು ಬೆಂಬಲಿಸಿ ಪ್ರೋತ್ಸಾಹಿಸಿದ ಮಾಧ್ಯಮ ಮಿತ್ರರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.


























