ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮೂವರು ಬಂಧನ
RB NEWS
Bureau Report
ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ: ಮೂವರು ಬಂಧನ
ದಕ್ಷಿಣ ಕನ್ನಡ, ಮೇ.21: ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಂಡು ಕೇರಳ ಮೂಲದ ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ (36), ಫೈಸಲ್ ಆದಿಲ್ (27) ಹಾಗೂ ಉಸ್ಮಾನ್ ಸಲೀಂ (18) ಎಂದು ಗುರುತಿಸಲಾಗಿದ್ದು, ಇವರು ಕೇರಳದ ಕಾಸರಗೋಡು ನಿವಾಸಿಗಳಾಗಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಗಳು ಅನ್ಯಕೋಮಿ ಸಮುದಾಯದ ಯುವತಿಯರನ್ನು ದಿಡುಪೆ ಜಲಪಾತದ ಸೌಂದರ್ಯ ವೀಕ್ಷಣೆಯ ನೆಪದಲ್ಲಿ ಸ್ಥಳಕ್ಕೆ ಕರೆತಂದಿದ್ದರು ಎನ್ನಲಾಗಿದೆ. ಜಲಪಾತದ ಸಮೀಪದಲ್ಲಿದ್ದ ವೇಳೆ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಘಟನೆಯನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣ ಎಚ್ಚೆತ್ತುಕೊಂಡು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.