ದೇವರ ಚಿನ್ನಾಭರಣ ಎಗರಿಸಿದ ಅರ್ಚಕನ ಬಂಧನ

Picture of RB NEWS

RB NEWS

Bureau Report

ಕುಂದಾಪುರ: ಗಂಗೊಳ್ಳಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವಿಗೆ ಹರಕೆ ರೂಪದಲ್ಲಿ ಅರ್ಪಿಸಿದ್ದ ಒಟ್ಟು 21 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅರ್ಚಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಶಿರಸಿ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿಯಾಗಿದ್ದು ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಅರ್ಚಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನರಸಿಂಹ ಭಟ್ ನನ್ನು ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನಕ್ಕೆ ಮೇ 16ರಿಂದ ಅರ್ಚಕನಾಗಿ ನೇಮಿಸಿಕೊಂಡು ಮಾಸಿಕ ಸಂಬಳ ಹಾಗೂ ವಾಸಕ್ಕೆ ಮನೆಯನ್ನು ನೀಡಿ ಬಾಡಿಗೆ ನೀಡಲಾಗುತ್ತಿತ್ತು.

ಆರೋಪಿಯು ಮೇ 16ರಿಂದ ಸೆ.21ರ ಮಧ್ಯಾವಧಿಯಲ್ಲಿ ದೇವಸ್ಥಾನದ ಅರ್ಚಕನಾಗಿದ್ದುಕೊಂಡು ದೇವಸ್ಥಾನದಲ್ಲಿ ಈ ಕುಕೃತ್ಯವೆಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಗಂಗೊಳ್ಳಿ ಪಿಎಸ್ಸೆ ಹರೀಶ್ ಆರ್. ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top