
ನಟೋರಿಯಸ್ ದಾವೂದ್ ಪೊಲೀಸರ ಬಲೆಗೆ
ಮಂಗಳೂರು : ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ನ.22ರಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಕೃತ್ಯ ಎಸಗಲು ಸ್ಕೆಚ್ ಹಾಕಿದ್ದನು.
ಖಚಿತ ಮಾಹಿತಿಯನ್ವಯ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡವು ದಾವೂದ್ ನನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆ ವೇಳೆ ದಾವೂದ್ ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿ ದಾವುದ್ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.
ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.































