ನಡ್ಯೋಡಿ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಪರಿಸರದ ಮಾಹಿತಿ
ಮೂಡುಬಿದಿರೆ: ಇಲ್ಲಿಗೆ ಸಮೀಪದ ನಡ್ಯೋಡಿ ಶಾಲಾ ವಿದ್ಯಾರ್ಥಿಗಳಿಗೆ ಜನವರಿ 15 ರಂದು ಗ್ರಾಮೀಣ ಪರಿಸರದ ಮಾಹಿತಿಯನ್ನು ನೀಡಲಾಯಿತು.
ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಮಾಹಿತಿ ನೀಡಿದರು.

ಅವರು ತಮ್ಮ ಭಾಷಣದಲ್ಲಿ ಸರ್ಕಾರದಿಂದ ದೊರಕುವ ಹಲವಾರು ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ಉಷಾಲತಾ ಹೆಗ್ಡೆ ಸ್ವಾಗತಿಸಿದರು. ಮಮತಾ ವಂದಿಸಿದರು.





































