ನಾಪತ್ತೆಯಾದ ಬಾಲಕ ಆರ್ಯ ಪಾಲ್ಘಾಟ್ ನಲ್ಲಿ ಪತ್ತೆ

Picture of RB NEWS

RB NEWS

Bureau Report

ಉಡುಪಿ : ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ವಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.‌

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್‌ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ವಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ವಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top