ನಾಮನಿರ್ದೇಶಿತ ಸದಸ್ಯರಾಗಿ ವಿವೇಕಾನಂದ ಶೆಣೈ

Picture of RB NEWS

RB NEWS

Bureau Report

ಕಾರ್ಕಳ : ಕಾರ್ಕಳ ಪುರಸಭೆಗೆ ಬಾಕಿ ಉಳಿದಿದ್ದ ಒಂದು ಸ್ಥಾನಕ್ಕೆ ನಾಮನಿರ್ದೇಶಿತ ಸದಸ್ಯರಾಗಿ ವಿವೇಕಾನಂದ ಶೆಣೈ ಇವರನ್ನು ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಟಿ.ಮಂಜುನಾಥ ಅವರು ಆದೇಶಿಸಿದ್ದಾರೆ.
ಮಾರ್ಚ್ 6ರಂದು ಹೊರಡಿಸಿದ ಅದೇಶ ಪತ್ರದಲ್ಲಿ ಉಲ್ಲೇಖಿಸಿರುವಂತೆ ತಕ್ಷಣ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿವೇಕಾನಂದ ಶೆಣೈ ಅವರು ಕಾರ್ಕಳ ಪುರಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಮುಂದುವರಿಯಲಿದ್ದಾರೆ.
ಕಳೆದ ಕೆಲ ವರ್ಷಗಳ ಹಿಂದೆ ವಿವೇಕಾನಂದ ಶೆಣೈ ಅವರು ನಾಮನಿರ್ದೇಶಿತ ಸದಸ್ಯರಾಗಿ ನಿಯೋಜಿತರಾಗಿದ್ದರು. ಇದು ಎರಡನೇಯ ಅವಧಿಯಾಗಿದೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿವೇಕಾನಂದ ಶೆಣೈ ಅವರು ಮುನ್ನೆಡೆಯುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top