ನಿಯಂತ್ರಣ ತಪ್ಪಿದ ಕಾರು ಚಾಲಕ ದಾರುಣ ಮೃತ್ಯು ಮಂಗಳೂರು ನಂತೂರು ರಾ.ಹೆ.ಯಲ್ಲಿ ಘಟನೆ: ರಸ್ತೆ ವಿಭಜಕದ ಬೇಲಿಗೆ ಸಿಲುಕಿದ ವಾಹನ

Picture of RB NEWS

RB NEWS

Bureau Report

ಮಂಗಳೂರು : ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ದಾರುಣ ರೀತಿಯಲ್ಲಿ ಸಾವನೊಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಶಮಿತ್ ಶೆಟ್ಟಿಯಾನೆ ಬಂಟಿ(29) ಮೃತ ವ್ಯಕ್ತಿಯಾಗಿದ್ದು, ಉಳ್ಳಾಲ ವಲಯದ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ನೆಂದು ತಿಳಿದುಬಂದಿದೆ.

ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಪಾಲ್ಗೊಂಡು ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಪುತ್ರ ಸಂತೋಷ್ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top