ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆ ವೊಂದರಲ್ಲಿ ಜು. 27_ರ ನಸುಕಿನ ಜಾವ 3-35 ಕ್ಕೆ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆ ಅದಾಗಿದೆ.



ಮಾಹಿತಿ ದೊರೆತ ಬೆನ್ನಲ್ಲೇ ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿರುತ್ತಾರೆ .
ಕಾರ್ಯಾಚರಣೆಯಲ್ಲಿ ಹೆಚ್ಚಿನ ಪ್ರಮಾಣದ ಅನಾಹುತವನ್ನು ತಪ್ಪಿಸಿದ್ದಾರೆ. ಸುಮಾರು 2 ಲಕ್ಷ ನಷ್ಟ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ.
ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್ , ಸಿಬ್ಬಂದಿಯವರಾದ ಅಚ್ಚುತ ಕರ್ಕೇರ,ಜಯ ಮೂಲ್ಯ, ನಿತ್ಯಾನಂದ, ರವಿಚಂದ್ರ ಭಾಗಿಯಾಗಿದ್ದರು.































