ನೈಜಸ್ಥಿತಿ ಅರಿತುಕೊಳ್ಳಲು ಎರಡು ವರ್ಷಗಳು: ಕೊನೆಗೂ ಎಚ್ಚೆತ್ತುಗೊಂಡ ರಾಷ್ತ್ರೀಯ ಹೆದ್ದಾರಿ ಪ್ರಾಧಿಕಾರ

Picture of RB NEWS

RB NEWS

Bureau Report

ಕಾರ್ಕಳ : ಸಾಣೂರು ರಾಷ್ಟ್ರೀಯ ಹೆದ್ದಾರಿ_ 169… ಅಪಾಯಕಾರಿ ಸ್ಥಿತಿಯಲ್ಲಿ ಹೈ _ಟೆನ್ಶನ್ ಟವರ್ ಅಂಚಿನಲ್ಲಿ ಗುಡ್ಡದ ಮಣ್ಣು ಜರಿಯುತ್ತಿದ್ದ ಪ್ರದೇಶಕ್ಕೆ ಇದೀಗ ತಡೆಗೋಡೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

ಕಳೆದ ಎರಡು ಮಳೆಗಾಲದ ಸಂದರ್ಭದಲ್ಲಿ ತೀರಾ ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿತ್ತು.


ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾಡಳಿತವು ಅಪಾಯಕಾರಿ ಸ್ಥಳಕ್ಕೆ ಭೇಟಿ ನೀಡಿ ತಡೆಗೋಡೆ ನಿರ್ಮಾಣಕ್ಕೆ ಅಂದಾಜು ಪಟ್ಟಿಯನ್ನು ಸಲ್ಲಿಸಿ ಅನುಮೋದನೆ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ನಿರ್ದೇಶನ ನೀಡಿದ್ದರು.

ಕಳೆದ ಮಳೆಗಾಲದಲ್ಲಿ ನಿರಂತರ ಮಳೆಗೆ ಹೈಟೆನ್ಷನ್ ಟವರ್ ಅಡಿಯ ಗುಡ್ಡದ ಮಣ್ಣು ಜಾರಿ ಕೆಳಗೆ ಬಿದ್ದು ಟವರ್ ಧರಾಶಾಹಿಯಾಗುವ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು. ಈ ವಿಚಾರವನ್ನು ‘ಆರ್.ಬಿ.ನ್ಯೂಸ್” ಹಂತ ಹಂತವಾಗಿ ಪ್ರಕಟಿಸಿ ಜಿಲ್ಲಾಡಳಿತವನ್ನು ಎಚ್ಚರಿಸುವ ಕಾರ್ಯನಡೆಸುವ ಮೂಲಕ ನಾಗರಿಕರ ಪ್ರಶಂಸೆಗೆ ಕಾರಣವಾಗಿತ್ತು.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಒಂದೆರಡು ದಿನ ಟ್ರಾಫಿಕ್ ಪೊಲೀಸರು ಹೈ ಟೆನ್ಶನ್ ಟವರ್ ಅಡಿಭಾಗದ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.

ನಿರಂತರ ಮಳೆಯ ಕಾರಣದಿಂದಾಗಿ ಕಾಮಗಾರಿಯನ್ನು ಕೈಗೊಳ್ಳಲು ಅಡ್ಡಿಯಾಗಿತ್ತು. ಮಳೆಗಾಲ ಕಳೆದು ಎರಡು ತಿಂಗಳ ಬಳಿಕ ಇದೀಗ ಹೆದ್ದಾರಿ ಹೋರಾಟ ಸಮಿತಿ ಮತ್ತು ಸಾರ್ವಜನಿಕರ ತೀವ್ರ ಪ್ರತಿಭಟನೆ ಮತ್ತು ಆಗ್ರಹದ ಮೇರೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ ಇಲಾಖೆ ಎಚ್ಚೆತ್ತು ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಗವನ್ನು ಹೆಚ್ಚಿಸುತ್ತಿದೆ.


ಅಭಿವೃದ್ಧಿಯ ಜೊತೆಗೆ ಸುರಕ್ಷತೆ ತುಂಬಾ ಅಗತ್ಯ ಎಂದು ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಮಾಧ್ಯಮಕ್ಕೆ ತಿಳಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top