ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಮತ್ತು ನ್ಯಾಯವಾದಿಗಳ ಸಂಘ (ರಿ.), ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಲುವಾಗಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಕಳ ನ್ಯಾಯಾಲಯದ ಆವರಣದಲ್ಲಿ ಯೋಗ ಗುರು ಅಶೋಕ್ ಇವರ ನೇತೃತ್ವದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.
ಯೋಗ ಗುರುಗಳು ಯೋಗ ದಿನಾಚರಣೆಯ ಮಹತ್ವವನ್ನು ಮತ್ತು ಯೋಗಾಸನದ ಮಹತ್ವವನ್ನು ತಿಳಿಸಿಕೊಟ್ಟರು.
ಹಿರಿಯ ಸಿವಿಲ್ ಮತ್ತು ಎ.ಸಿ.ಜೆ.ಯಂ. ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಇದರ ಅಧ್ಯಕ್ಷರಾದ ಶರ್ಮಿಳಾ ಸಿ. ಎಸ್., ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಕೋಮಲ ಆರ್.ಸಿ., ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಅಬುತಾಹೀರ್, ಕಾರ್ಕಳ ನ್ಯಾಯವಾದಿಗಳ ಸಂಘ (ರಿ.) ಇದರ ಅಧ್ಯಕ್ಷರಾದ ಸುನೀಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಕೆ. ಹರೀಶ್ ಅಧಿಕಾರಿ, ಕೋಶಾಧಿಕಾರಿಗಳಾದ ಅರುಣ್ ಕುಮಾರ್ ಶೆಟ್ಟಿ, ವಕೀಲರುಗಳು, ನ್ಯಾಯಾಲಯದ ಎಲ್ಲಾ ಸಿಬ್ಬಂಧಿ ಯೋಗ ಮಾಡುವುದರೊಂದಿಗೆ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.






































