ಬಂಟ್ವಾಳ : ಪಠ್ಯ ದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾದಾಗ ಮಾತ್ರ ಕಲಿಕೆಯು ಪೂರ್ಣವಾಗುತ್ತದೆ ಎಂದು ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷ ಸುಧೀರ್ ಸಾಗರ್ ಹೇಳಿದರು.
ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ಹಸ್ತಾಂತರಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು.
ಮಾನಸಿಕದೊಂದಿಗೆ ದೈಹಿಕ ಸದೃಡವಾಗಬೇಕು. ಅದಕ್ಕೆ ಪೂರಕವಾಗಿ ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.
ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂದು ಅವರು ಅಭಿಮತ ವ್ಯಕ್ತಪಡಿಸಿದರು.


ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ರವರ ಸಹೋದರ ಶ್ರೀದೇವಿ ಕನ್ ಸ್ಟ್ರಕ್ಚರ್ ಮಾಲಕ
ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೇರಾ ಎಸ್ ಎಸ್ ಇಂಡಸ್ಟ್ರೀಸ್ ಬಂಟ್ವಾಳ ಇದರ ಪ್ರೇಮನಾಥ ಕೆ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೊರಗಪ್ಪ ನಾಯ್ಕ , ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ವಂದಿಸಿ, ನಿರೂಪಿಸಿದರು






































