ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಆನೆಗುಂದಿ(ಕಟಪಾಡಿ) : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ ಪಡುಕುತ್ಯಾರು ಇಲ್ಲಿನ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯ ಸಮಾರಂಭ 2025 ಜೂನ್ 11ರ ಬೆಳಿಗ್ಗೆ 8.00ಗಂಟೆಗೆ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಪಡುಕುತ್ಯಾರು ಜರುಗಲಿದೆ.
ಈ ಸಂದರ್ಭದಲ್ಲಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಅಗತ್ಯವಾಗಿ ಭಾಗವಹಿಸಿ ಜಗದ್ಗುರುಗಳವರ ಅನುಗ್ರಹ ಮಂತ್ರಾಕ್ಷತೆ ಪಡೆಯಬೇಕಾಗಿ ವಿನಂತಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



































