ಪರಶುರಾಮನ ಮೂರ್ತಿ ಕಂಚಿನದಲ್ಲ! ಹಿತ್ತಾಳೆ ಲೋಹದಿಂದ ನಿರ್ಮಾಣ !!

Picture of RB NEWS

RB NEWS

Bureau Report

ಕಾರ್ಕಳ : ಉಮ್ಮಿಕಲ್ಲು ಬೆಟ್ಟದಲ್ಲಿ ನಿರ್ಮಿಸಲಾಗಿದ್ದ ಪರಶುರಾಮ ಮೂರ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಲೇ ತಜ್ಜರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಹಲವು ಮಹತ್ವದ ವಿಚಾರಗಳು‌ ಬಯಲಾಗಿದೆ.

ಪ್ರಕರಣದ ತನಿಖಾ ಕಾಲದಲ್ಲಿ ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಈತನು ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಜರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಭೀತಾಗಿರುತ್ತದೆ.

ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರು ವರ್ಕ ಆರ್ಡರ್ ನಲ್ಲಿ ಇದ್ದ ಷರತ್ತುಗಳನ್ನು ಪಾಲಿಸಿರುವುದಿಲ್ಲ. ದಿನಾಂಕ 12.10.2023 ರಂದು ಪರಶುರಾಮ ಮೂರ್ತಿಯ ಸೊಂಟದಿಂದ ಮೇಲ್ಬಾಗವನ್ನು ಉಮ್ಮಿಕಲ್ ಬೆಟ್ಟದಿಂದ ತೆಗೆದುಕೊಂಡು ಹೋಗಿ ಉಡುಪಿ ತಾಲೂಕು ಅಲೆವೂರು ಗ್ರಾಮದ ಪ್ರಗತಿ ನಗರ ಎಂಬಲ್ಲಿರುವ ನಿರ್ಮಿತಿ ಕೇಂದ್ರಕ್ಕೆ ಸಂಬಂಧಿಸಿರುವ ಶೆಡ್‌ನಲ್ಲಿ ದಿನಾಂಕ 25.02.2024ರ ತನಕ ಇರಿಸಿಕೊಂಡಿರುತ್ತಾರೆ. ಆದರೆ ಮೂರ್ತಿಯ ಸೊಂಟದಿಂದ ಮೇಲ್ಬಾಗವನ್ನು ಶಿಲ್ಪಿ ಕೃಷ್ಣ ನಾಯ್ಕ ಈತನಿಗೆ ಹಸ್ತಾಂತರ ಮಾಡಿದ್ದು, ಕೃಷ್ಣ ನಾಯ್ಕ ಈತನು ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ತಪ್ಪು ಮಾಹಿತಿಯನ್ನು ನೀಡಿರುತ್ತಾರೆ.

ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುತ್ತಾರೆ. ಅವರ ವಿರುದ್ದ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಕಾರ್ಕಳದ ನ್ಯಾಯಾಲಯಕ್ಕೆ ನಿವೇದಿಸಲಾಗಿದೆ.

ದೂರಿನ ಕುರಿತು….


ದಿನಾಂಕ 21.06.2024 ರಂದು ಕೃಷ್ಣ ಶೆಟ್ಟಿ ಇವರು ಫಿರ್ಯಾದಿ ನೀಡಿದ್ದು, ಅದರಲ್ಲಿ ಕೃಷ್ಣ ನಾಯಕ್ Krish Art World ಎಂಬ ಸಂಸ್ಥೆಯ ಮುಖಾಂತರ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಆರೋಪಿ ಕೃಷ್ಣ ನಾಯ್ಕ ಎಂಬವರು ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಯನ್ನು ಮಾಡಿರುತ್ತಾರೆ. ಎಂದು ನೀಡಿದ ಫಿರ್ಯಾದಿಯಂತೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 120/2024 ಕಲಂ 420.409 ಐಪಿಸಿ ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top