ಪಲ್ಟಿ ಹೊಡೆದ ಟೆಂಪೋ: ಓರ್ವ ಸಾವು

Picture of RB NEWS

RB NEWS

Bureau Report

ಕಾರ್ಕಳ : ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ.

ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಡಾರಿ ಕ್ರಾಸ್‌ನಲ್ಲಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top