ಪಳ್ಳಿ – ನಿಂಜೂರು ಗ್ರಾಮಸ್ಥರಿಗೆ ಸಂತಸದ ಕ್ಷಣ – ದಿನಕರ ಶೆಟ್ಟಿ

Picture of RB NEWS

RB NEWS

Bureau Report

ಕಾರ್ಕಳ : ಊರಿಗೆ ಸರಕಾರಿ ಬಸ್ಸು ಬಂದಿದೆ. ಹಲವಾರು ವರ್ಷದ ಕನಸು ನನಸಾಗಿದೆ. ಎಲ್ಲರಿಗೂ ಸಂತಸದ ಸುದ್ಧಿ ಅದರಲ್ಲೂ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಎಲ್ಲಿಲ್ಲದ ಖುಷಿ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯಲ್ಲಿ ಒಂದಾದ ಶಕ್ತಿ ಯೋಜನೆಯ ಸರಕಾರಿ ಬಸ್ಸುಗಳಲ್ಲಿ ಉಚಿತ ಬಸ್ಸು ಪ್ರಯಾಣ ಸೌಲಭ್ಯ ಸಿಕ್ಕಿದಂತಾಗುತ್ತದೆ ಎನ್ ಎಸ್ ಯು ಐ ಸಂಘಟನೆಯ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಅಭಿಮತ ವ್ಯಕ್ತಪಡಿಸಿದ್ದಾರೆ.

ಬಸ್ಸು ಸಂಚಾರಕ್ಕೆ ಕಾರಣಕರ್ತರಾದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಂಸದ ಜಯ ಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top