ಬೆಳ್ತಂಗಡಿ: ಪಶುವೈದ್ಯನೊಬ್ಬ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಆತ್ಮೀಯಗೆ ಹೊಡೆದ ಒಂದೇಟು ವ್ಯಕ್ತಿಯ ಪ್ರಾಣಕ್ಕೆ ಕುತ್ತು ಉಂಟುಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ಎಂಬಲ್ಲಿ ನಡೆದಿದೆ.
ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಹಲ್ಲೆಗೊಳಗಾಗಿ ಸಾವನ್ನಪ್ಪಿದ ದುರ್ದೈವಿ.
ವಿಪರೀತ ಜ್ವರದಿಂದ ಬಳಲುತ್ತಿದ್ದ ಕೃಷ್ಣ ಯಾನೆ ಕಿಟ್ಟ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಹಿಂತಿರುಗಿದ್ದರು.
ತನ್ನ ಪರಿಚಿತರಾಗಿದ್ದ ಕೊಕ್ಕಡದ ಪಶು ವೈದ್ಯ ಡಾ. ಕುಮಾರ್ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತಾ, ಜ್ವರದಿಂದ ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗದೆರ ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದಿಯಾ ಎಂದು ಬುದ್ದಿ ಮಾತು ಹೇಳಿ ಆತ್ಮೀಯತೆಯಲ್ಲಿ ಹೊಡೆದ ಒಂದು ಏಟು ಕೃಷ್ಣನ ಪ್ರಾಣಕ್ಕೆ ಕುತ್ತುತಂದಿತು.
ಪಶು ವೈದ್ಯ ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೆಲ ಹೊತ್ತಿನಲ್ಲಿಯೇ ಸಾವನ್ನೊಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.