[t4b-ticker]

ಪಾಕ್ ಪರ ಘೋಷಣೆ: ಮೂವರ ಬಂಧನ

Picture of RB NEWS

RB NEWS

Bureau Report

ಬೆಂಗಳೂರು : ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹಾವೇರಿಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ಆರ್.ಟಿ.ನಗರದ ನಿವಾಸಿ ಮುನಾವರ್, ದೆಹಲಿ ಮೂಲದ ಇಲ್ತಾಜ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.


ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಜಯಗಳಿಸಿದ್ದರು. ಈ ಹಿನ್ನೆಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರು. ಬಂಧಿತರ ಪೈಕಿ ಓರ್ವ ಪಾಕಿಸ್ತಾನ ಒಂದು ಕೂಗಿದರೆ, ಇನ್ನಿಬ್ಬರು ಜಿಂದಾಬಾದ್ ಎಂದು ಕೂಗಿದ್ದರು. ಈ ಘಟನೆಯು ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿತ್ತು. ಈ ಬಗ್ಗೆ ವಿಧಾನಸೌಧ ಠಾಣಾ ಪೊಲೀಸರು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top