ಕುಂದಾಪುರ :ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಮೆಣಸು ಸಾಗಾಟದ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬಸ್ ಪಲ್ಟಿ ಹೊಡೆದಿದ್ದು, ಐವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಞಡಿ ಸಮೀಪದ ಜನ್ನಾಲ್ ಎಂಬಲ್ಲಿ ಸಂಭವಿಸಿದೆ.
ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕಪ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ 108 ಅಂಬುಲೆನ್ಸ್ ಅಗಮಿಸಿದ್ದು, ಅದರ ಸಿಬ್ಬಂದಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಘವೇಂದ್ರ (43), ವಾಸಿಂ (30), ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ.
ರಾಘವೇಂದ್ರ ಹಾಗೂ ವಾಸಿಂ ಪಿಕಪ್ ನಲ್ಲಿ ಇದ್ದವರು. ಉಳಿದವರು ಬಸ್ಸಿನಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





































