ಪುತ್ತಿಗೆ ಶ್ರೀಕ್ಷೇತ್ರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭೇಟಿ
ವರದಿ : ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ : ಪುರಾಣ ಪ್ರಸಿದ್ಧ ಹನ್ನೆರಡು ಮಾಗಣೆಯ, ಚೌಟರ ಸೀಮೆಯ ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಕಟ್ಟಡ ರಚನೆಯ ಕಾಮಗಾರಿಯ ವೀಕ್ಷಣೆಗೆ ಧರ್ಮಸ್ಥಳದ ಧರ್ಮಾಧಿಕಾರಿ
ವೀರೇಂದ್ರ ಹೆಗ್ಗಡೆ ಆಗಮಿಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾಗಿರುವ ಚೌಟರ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ದೇವಾಲಯದ ಅರ್ಚಕ ಅನಂತ ಕೃಷ್ಣ ಭಟ್ ಹಾಗೂ ಇತರರು ಆಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಕಂಡು ಸಂತಸ ವ್ಯಕ್ತಪಡಿಸಿದರು.




































