ಪುತ್ತೂರಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು
ಬೆಂಗಳೂರು : ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆಯ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.







































