ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ಟ ಇನ್ನಿಲ್ಲ
ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ವ.) ಅಲ್ಪಕಾಲದ ಅಸ್ವಾಸ್ಥ್ಯದಿಂದ ಜುಲೈ 8ರ ರಾತ್ರಿ ತಾವು ವಾಸ್ತವ್ಯವಿದ್ದ ಇಲ್ಲಿನ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸಹೋದರ ಸಹೋದರಿಯರು ಹಾಗೂ ಅನೇಕ ಮಂದಿ ಶಿಷ್ಯರನ್ನು ಅಗಲಿದ್ದಾರೆ.
ಜ್ಯೋತಿಷ್ಯ, ವೇದ ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟ, ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು


























