ಪೊಲೀಸ್ ಇಲಾಖೆಗೆ ಕಳಂಕಿತ ಇನ್ಸ್ ಪೆಕ್ಟರ್ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ

Picture of RB NEWS

RB NEWS

Bureau Report

ಮಂಗಳೂರು : ಡ್ಯೂಟಿ ಹಾಕಲು ಕಿರಿಯ ಪೊಲೀಸರಿಂದ 18,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕೆಎಸ್ ಆರ್ ಪಿ ಇನ್ಸ್ ಪೆಕ್ಟರ್ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ.

ಮಹಮ್ಮದ್ ಆರೀಸ್ ಎಂಬವರು ಕರ್ತವ್ಯ ನಿರ್ವಹಿಸಬೇಕಾದರೆ ತನಗೆ 20,000 ರೂ ಗಳನ್ನು ನೀಡಬೇಕೆಂದು ಹಾಗೂ ಪ್ರತಿ ತಿಂಗಳು ತನಗೆ 6,000 ರೂಯಂತೆ ಹಣ ನೀಡುವಂತೆ ಕೇಳಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ. ಈಗಾಗಲೇ ದೂರುದಾರರು ಮಹಮ್ಮದ್ ಆರೀಸ್ ಗೆ ಪ್ರತಿ ತಿಂಗಳು 6,000 ರೂ. ಯನ್ನು ಲಂಚವನ್ನಾಗಿ ನೀಡುತ್ತಾ ಬಂದಿದ್ದಾರೆ. ಈವರೆಗೆ ಒಟ್ಟು 50,000 ರೂಪಾಯಿ ಹಣವನ್ನು ಮಹಮ್ಮದ್ ಆರೀಸ್ ನೀಡಿದ್ದಾರೆ.

ದೂರುದಾರರು ತಮ್ಮ ತಂದೆಯ ಅನಾರೋಗ್ಯದ ನಿಮಿತ್ತ 2024ರ ಎಪ್ರಿಲ್ ತಿಂಗಳಿನಿಂದ ಜೂನ್ ತಿಂಗಳವರೆಗಿನ 3 ತಿಂಗಳ ಬಾಪ್ತು ರೂ 18,000 ರೂ. ಲಂಚವಾಗಿ ಕೊಡಬೇಕಾದ ಹಣವನ್ನು ಮಹಮ್ಮದ್ ಆರೀಸ್‌ರವರಿಗೆ ಕೊಡಲು ದೂರುದಾರರಿಗೆ ಸಾಧ್ಯವಾಗಿರುವುದಿಲ್ಲ. ದೂರುದಾರರು 3 ತಿಂಗಳ ಬಾಪ್ತು 18,000 ರೂ. ಹಣವನ್ನು ನೀಡಿಲ್ಲ ಎಂಬುದಾಗಿ ಪ್ರತಿ ದಿನಾಲೂ ದೂರುದಾರರಿಗೆ ಕರೆ ಮಾಡಿ ನೀಡಲು ಬಾಕಿ ಇರುವುದನ್ನು ನೀಡು, ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂಬುದಾಗಿ ದೂರುದಾರರಿಗೆ ತಿಳಿಸಿ 18,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ಇಂದು ಕೆಎಸ್‌ಆರ್‌ಪಿ ಇನ್ಸ್ ಪೆಕ್ಟರ್ ಮಹಮ್ಮದ್ ಆರೀಸ್ ದೂರುದಾರರಿಂದ 18,000 ಲಂಚದ ಹಣವನ್ನು ಸ್ವೀಕರಿಸುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಇನ್ನೂ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಬಳಿಕ ಮಂಗಳೂರು ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಹಾಜರುಪಡಿಸಲಿದ್ದಾರೆ.

ಮಂಗಳೂರು ಲೋಕಾಯುಕ್ತ ಎಸ್ಪಿ ಎಂ.ಎ.ನಟರಾಜ ನೇತೃತ್ವದಲ್ಲಿ ಡಿವೈಎಸ್ಪಿ ಡಾ.ಗಾನಾ ಪಿ ಕುಮಾರ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್,ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top