ಫಯಾಜ್‌ನನ್ನು ಸಿಐಡಿಗೆ ಒಪ್ಪಿಸಿದ ಪೊಲೀಸರು

Picture of RB NEWS

RB NEWS

Bureau Report

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ಸಿ ಕೋ ರ್ಟ್‌ಗೆ ಅರ್ಜಿ ಸಲ್ಲಿಸಿತ್ತು.ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top