ಫೆಬ್ರವರಿ 22ರಂದು ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ–2026
RB NEWS
Bureau Report
ಫೆಬ್ರವರಿ 22ರಂದು ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ–2026
ಕಾಸರಗೋಡು: ಡಾ. ವಾವನ್ ರಾವ್ ಬೇಕಲ್–ಸಂಧ್ಯಾರಾಣಿ ಟೀಚರ್ ಸಾರಥ್ಯದ “ಸೀತಮ್ಮ ಪುರುಷ ನಾಯಕ ಸ್ಮಾರಕ” ಕನ್ನಡ ಭವನ ಗ್ರಂಥಾಲಯ (ರಿ.223/2008) ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ–ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ–2026 ಅನ್ನು ಆಯೋಜಿಸಲಾಗುತ್ತಿದೆ. ಈ ಸಮ್ಮೇಳನವು 2026 ಫೆಬ್ರವರಿ 22 (ಭಾನುವಾರ) ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಸಭಾಂಗಣದಲ್ಲಿ, “ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಡಾ. ಮಾನಸ ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಸರ್ಕಾರ ಇವರಿಂದ 02.02.2025 ರಂದು ಉದ್ಘಾಟಿಸಲಾದ ಸಂಸ್ಥೆಯ ಆಶ್ರಯದಲ್ಲಿ ನಡೆಸಲಾಗುತ್ತಿದೆ.
ಸಮ್ಮೇಳನದ ಅಂಗವಾಗಿ ಕವಿಗೋಷ್ಠಿ ಯುವ ಕವಿಗೋಷ್ಠಿ ವಿಚಾರಗೋಷ್ಠಿ “ಕವಿ ಕಾವ್ಯವಿಭೂಷಣ” ಮತ್ತು “ಕವಿ ಕಾವ್ಯ ಕಂಠೀರವ” ಪ್ರಶಸ್ತಿ ಪ್ರದಾನ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ ಸಾಂಸ್ಕೃತಿಕ ಕಲಾ ವೈಭವ ಯಕ್ಷಗಾನ ಬಯಲಾಟ 101 ಮಂದಿಯಿಂದ ಪ್ರಾತಃಕಾಲ ಭಜನೆ
ಇತ್ಯಾದಿ ಸನಾತನ ಸಂಸ್ಕೃತಿಯ ವೈಭವಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ. ಪ್ರಶಸ್ತಿಗೆ ಅರ್ಹತೆಯುಳ್ಳ ಸ್ವರಚಿತ ಚುಟುಕು ಕವಿಗಳು ತಮ್ಮ ವಿವರಗಳನ್ನು 9037173400 ಮೊಬೈಲ್ ಸಂಖ್ಯೆಗೆ ವಾಟ್ಸಪ್ ಮೂಲಕ ಸಂಪರ್ಕಿಸುವಂತೆ ಕನ್ನಡ ಭವನದ ಸ್ಥಾಪಕರೂ, ಕೇರಳ ರಾಜ್ಯ–ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರೂ ಆದ ಡಾ. ವಾಮನ್ ರಾವ್ ಬೇಕಲ್ ಅವರು ತಿಳಿಸಿದ್ದಾರೆ.