ಫೆ.22ರಂದು ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನಚುಟುಕು ಕವಿ ಹಾಗೂ ಯುವ ಕವಿಗೋಷ್ಠಿಗೆ ಆಹ್ವಾನ
RB NEWS
Bureau Report
ಫೆ.22ರಂದು ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ಚುಟುಕು ಕವಿ ಹಾಗೂ ಯುವ ಕವಿಗೋಷ್ಠಿಗೆ ಆಹ್ವಾನ
ಕಾಸರಗೋಡು: ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ–ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026ರ ಫೆಬ್ರವರಿ 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು–ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ಚುಟುಕು ಕವಿಗೋಷ್ಠಿ ಹಾಗೂ ಚುಟುಕು ಯುವ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಯುವ ಕವಿಗೋಷ್ಠಿಯಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಎರಡೂ ವಿಭಾಗಗಳಲ್ಲಿ ಒಬ್ಬರಿಗೆ ಗರಿಷ್ಠ ಮೂರು ಚುಟುಕು ವಾಚನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕವಿಗಳಿಗೆ ಮುಕ್ತ ಅವಕಾಶವಿರುತ್ತದೆ. ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿರಾಜ್ ಅಡೂರು (ಮೊ. 94474 90344) ಅವರನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬೇಕಾಗಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.