ಬಜಗೋಳಿ ಕಾಲೇಜಿನಲ್ಲಿ ಅಮ್ಮನ ನೆರವು “ವಿದ್ಯಾರ್ಥಿ ವೇತನ” ಕಾರ್ಯಕ್ರಮ
ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್(ರಿ) ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿದ 17 ಮಂದಿ ಪ್ರತಿಭಾನ್ವಿತರಿಗೆ ಒಟ್ಟು 1.80 ಲಕ್ಷ ರೂಪಾಯಿಗಳ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಜರಗಿತು.
ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ “ಉದಯ ಕೃಷ್ಣಯ್ಯ ಶೆಟ್ಟಿ ಚಾರಿ ಟೇಬಲ್ ಟ್ರಸ್ಟಿನ “ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಇವರು
ಅವಿನಾಶ್ ಶೆಟ್ಟಿ ಅವರಂತೆ ಬಾಲ್ಯದಲ್ಲಿ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಂದ ಇಂತಹ ಸಮಾಜಮುಖಿ ಕಾರ್ಯಗಳು ನಡೆಯುತ್ತಿದ್ದು ವಿದ್ಯಾರ್ಥಿಗಳು ಸಹ ಮುಂದೆ ವಿದ್ಯಾವಂತರಾಗಿ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಹಾಗೂ ಹೆಚ್ಚು ಹೆಚ್ಚು ಯುವ ಜನರು ರಾಜಕೀಯ ವ್ಯವಸ್ಥೆಯೊಳಗೆ ಸೇರಿಕೊಂಡು ಉತ್ತಮ ಸಮಾಜ ನಿರ್ಮಾಣದ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಮುಡಾರು ಗ್ರಾಮ ಪಂಚಾಯತಿನ ಅಧ್ಯಕ್ಷೆ ಶೃತಿ ಡಿ. ಅತಿಕಾರಿ ವಹಿಸಿದ್ದರು.
ವೇದಿಕೆಯಲ್ಲಿ “ಅಮ್ಮ ಚಾರಿಟೇಬಲ್ ಟ್ರಸ್ಟಿನ” ಅಧ್ಯಕ್ಷ ಅವಿನಾಶ್ ಶೆಟ್ಟಿ ,”ಕರ್ನಾಟಕ ಕ್ರಷರ್ಸ್ ಅಸೋಸಿಯೇಷನ್ “ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ, ಸಂಸ್ಥೆಯ ಮಹಾಪೋಷಕರಾದ ಉಮೇಶ್ ರಾವ್,
“ಕೆ.ಎಂ.ಎಫ್” ನ ನಿರ್ದೇಶಕರಾಗಿರುವ
ಸುಧಾಕರ್ ಶೆಟ್ಟಿ, ಯುವ ಉದ್ಯಮಿಗಳಾದ ಸೂರಜ್ ಶೆಟ್ಟಿ ಮತ್ತು ಗುರುಪ್ರಸಾದ್ ಉಪಸ್ಥಿತರಿದ್ದರು.
ಸಂಸ್ಥೆಯ ಎನ್. ಎಸ್ .ಎಸ್ .ಕಾರ್ಯಕ್ರಮಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಾಂಶುಪಾಲ ಕೆ.ಪಿ ಲಕ್ಷ್ಮಿ ನಾರಾಯಣ ವಂದಿಸಿದರು.
ನಿವೃತ್ತ ಮುಖ್ಯ ಶಿಕ್ಷಕ ವಸಂತ್ ಎಂ ನಿರೂಪಿಸಿದರು.
ಸಮಾರಂಭದಲ್ಲಿ ಮುಡಾರು ಪಂಚಾಯಿತಿನ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ , ಸದಸ್ಯರಾದ ರಜತ್ ರಾಮ್ ಮೋಹನ್ , ಪ್ರಶಾಂತ್, ಶಿವಪ್ರಸಾದ್ ಹಾಗು ರಮಾಕಾಂತ್ ಶೆಟ್ಟಿ ಉಪಸ್ಥಿತರಿದ್ದರು














