ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ – ಆರೋಪಿಯ ಬಂಧನ
RB NEWS
Bureau Report
ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ – ಆರೋಪಿಯ ಬಂಧನ
ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಗೋಳಿಯ ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 2026ರ ಜನವರಿ 16ರಂದು ಕಳ್ಳನೊಬ್ಬ ಸೊಸೈಟಿಯ ಬೀಗ ಮುರಿದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ ಸುರೇಶ್ ಕೊರಗ ಪೂಜಾರಿ ಎಂಬುದು ಖಚಿತಪಡಿಸಿದ್ದಾರೆ. ಅದರಂತೆ ದಿನಾಂಕ 17-01-2026 ರಂದು ಆರೋಪಿತ ಸುರೇಶ್ ಕೊರಗ ಪೂಜಾರಿ (53 ವರ್ಷ), ತಂದೆ: ದಿವಂಗತ ಕೊರಗ ಪೂಜಾರಿ, ವಾಸ: ಅಷ್ಟೊಟ್ಟು ದರ್ಖಾಸು ಮನೆ, ನಿಟ್ಟೆ ಅಂಚೆ ಮತ್ತು ಗ್ರಾಮ, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ ಅವರನ್ನು ಬಂಧಿಸಲಾಗಿದೆ. ಆರೋಪಿತನ ಮೇಲೆ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ ಹಾಗೂ ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಯಶಸ್ವಿ ಕಾರ್ಯಾಚರಣೆ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್ ಅವರ ಮಾರ್ಗದರ್ಶನದಲ್ಲಿ, ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ., ಸಿಪಿಐ ಕಾರ್ಕಳ ಮಂಜಪ್ಪ ಅವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಎಂ.ಎಸ್., ಪಿಎಸ್‌ಐ ಸುಂದರ, ಎಎಸ್‌ಐ ಪ್ರಕಾಶ, ಎಎಸ್‌ಐ ಸುಂದರ ಗೌಡ, ಹೆಚ್.ಸಿ. ರುದ್ರೇಶ್, ಹೆಚ್.ಸಿ. ಚಂದ್ರಶೇಖರ್, ಪಿಸಿ ಸಂತೋಷ್, ಮಾಂತೇಶ್ ಹಾಗೂ ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿ ದಿನೇಶ್ ಅವರ ತಂಡದಿಂದ ನೆರವೇರಿಸಲಾಗಿದೆ.